ಸಿಎಂ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ: ಶ್ರೀರಾಮುಲು

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ. ಸೋತವರಿಗೆ ಸಚಿವ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಕೊಟ್ಟಮಾತನ್ನು ಎಂದೂ ತಪ್ಪಿಲ್ಲ. ಶೀಘ್ರದಲ್ಲಿಯೇ ಸಂಪುಟ ವಿಸ್ತಾರಾಣೆಯಾಗಲಿದೆ ಎಂದರು.

ಶ್ರೀರಾಮುಲು ಡಿಸಿಎಂ ಆಗಬೇಕು ಅನ್ನೋದು ಜನರ ಬೇಡಿಕೆ. ರಾಜ್ಯದ ಸಾಮಾನ್ಯ ಜನರ ಬೇಡಿಕೆಯನ್ನ ನಾನು ಅಲ್ಲಗೆಳೆಯಲು ಹೋಗುವುದಿಲ್ಲ. ಈ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಯಡಿಯೂರಪ್ಪನವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಏನು ನಿರ್ಧಾರ ಕೈಗೊಲ್ಳುತ್ತಾರೋ ಕಾದು ನೋಡೋಣ ಎಂದರು

ಜನರಿಗೆ ಸುಲಭವಾಗಿ ಆರೋಗ್ಯ ಹಾಗೂ ಚಿಕಿತ್ಸೆ ಸೇವೆ ಸಿಗಬೇಕು. ಅದಕ್ಕೆ ಬೇಕಾದ ಎಲ್ಲ ಕ್ರಮಗಳನ್ನ ನಾನು ಕೈಗೊಳ್ತೀನಿ. ಗುತ್ತಿಗೆ ಡಿ. ಗ್ರೂಪ್ ನೌಕರರು, ಇತರ ಗುತ್ತಿಗೆ ನೌಕರರನ್ನು ಯಾವುದೇ ಕಾರಣಕ್ಕೂ ತೆಗೆಯುವುದಿಲ್ಲ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು

Home add -Advt

ಈಗ ಹೆಲ್ತ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲು ಮನವಿ ಮಾಡಲಾಗಿದ್ದು, ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button