ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಕಳೆದ ಮೂರು ದಿನಗಳಿಂದ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ದೆಹಲಿಯಲ್ಲಿ ಎಐಸಿಸಿ ಕಚೇರಿ ಎದುರು ಹಾಗೂ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಕಚೇರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬ್ಯಾರಿಕೇಡ್ ಗಳನ್ನು ಉರುಳಿಸಿ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದ್ದಾರೆ. ಪೊಲೀಸರು ತಡೆಯಲು ಮುಂದಾದರೆ ಅವರ ಮೇಲೂ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ನ ಹಲವು ನಾಯಕರನ್ನು ಪೊಲೀಸರು ಎಳೆದುಕೊಂಡು ಹೋಗಿ ಬಸ್ ಹಾಗೂ ಪೊಲೀಸ್ ಜೀಪ್ ಗಳನ್ನು ತುಂಬಿದ್ದಾರೆ.
ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಇಂದೂ ಕೂಡ ತಪ್ಪಿಸಿಕೊಳ್ಳಲು ಯತ್ನಿಸಿದ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ರಸ್ತೆಯುದ್ದಕ್ಕೂ ಎಳೆದುಕೊಂಡು ಹೋಗಿದ್ದಾರೆ. ಅಲ್ಲದೇ ಎಳೆದೊಯ್ಯುವಾಗ ಪೊಲೀಸರೊಬ್ಬರು ಬೂಟುಕಾಲಿನಿಂದ ಬಿ.ವಿ.ಶ್ರೀನಿವಾಸ್ ಗೆ ಒದ್ದಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.
ಪ್ರತಿಭಟನಾಕಾರರ ಮೇಲೆ ಪೊಲೀಸರು ದರ್ಪ, ದೌರ್ಜನ್ಯ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಪ್ರಧಾನಿ ಮೋದಿ ನಾಯಿಯಂತೆ ಸಾಯ್ತಾರೆ…ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಮುಖಂಡನ ವಿರುದ್ಧ FIR
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ