LatestUncategorized

*ಸಂಸದ ಬಿ.ವೈ.ರಾಘವೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವಿದ್ಯುತ್ ದರ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಶಿವಮೊಗ್ಗ ಮೆಸ್ಕಾಂ ಕಚೇರಿ ಮುಂಭಾಗ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಪ್ರತಿಭಟನೆಯ ವೇಳೆ ಮಾತನಾಡಿದ ಬಿ.ವೈ.ರಾಘವೇಂದ್ರ ಕಾಂಗ್ರೆಸ್ ನವರು ಜನರಿಗೆ ಸುಳ್ಳು ಭರವಸೆ ಕೊತ್ಟು ಅಧಿಕಾರಕ್ಕೆ ಬಂದಿದ್ದಾರೆ. ಉಚಿತ ವಿದ್ಯುತ್ ಎಂದು ಘೋಷಣೆ ಮಾಡಿ ಈಗ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಸರ್ಕಾರದ ತಕ್ಷಣ ವಿದ್ಯುತ್ ದರ ಹೆಚ್ಚಳ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಜೂನ್ 18ರಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಈಶ್ವರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು. ಇದೇ ವೇಳೆ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದು, ಪೊಲೀಸರು ಸಂಸದ ಬಿ.ವೈ.ರಾಘವೇಂದ್ರ, ಅಶೋಕ್ ನಾಯಕ್ ಸೇರಿದಂತೆ ಹಲವನ್ನು ವಶಕ್ಕೆ ಪಡೆದಿದ್ದಾರೆ.


Related Articles

Back to top button