ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಸೈಕಲ್ ಜಾಥಾ ನಡೆಸಿದ್ದಾರೆ. ಬಿಜೆಪಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಲು ಮುಂದಾಗಿದ್ದ ಬಿಜೆಪಿ ನಾಯಕರು ತೈಲ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧಕ್ಕೆ ಸೈಕಲ್ ಏರಿ ಹೊರಟಿದ್ದ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಅಶ್ವತ್ಥನಾರಾಯಣ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ ಅವಕಾಶ ನಿಡದೇ ವಶಕ್ಕೆ ಪಡೆದ ಕ್ರಮದ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ