ಪ್ರಗತಿವಾಹಿನಿ ಸುದ್ದಿ; ಮೈಸೂರು: ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ. ಈ ಬಗ್ಗೆ ಪದೇ ಪದೇ ಚರ್ಚೆಯ ಅಗತ್ಯವಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಮುಂದಿನ 2 ವರ್ಷಗಳ ಕಾಲ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಇದನ್ನು ರಾಷ್ಟ್ರೀಯ ನಾಯಕರು ಕೂಡ ಸ್ಪಷ್ಟಪಡಿಸಿದ್ದಾರೆ. ರಾಜ್ಯ ನಾಯಕರೂ ಹೇಳಿಕೆ ಕೊಟ್ಟಿದ್ದಾರೆ. ಅಷ್ಟೇ ಏಕೆ ಸ್ವತ: ಸಿಎಂ ಯಡಿಯೂರಪ್ಪ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ನಾಯಕತ್ವ ಬದಲಾವಣೆ ಚರ್ಚೆ ಅನಗತ್ಯ ಎಂದರು.
ಯಾರೇ ದೆಹಲಿಗೆ ಹೋದಾಕ್ಷಣ ಇಂತಹ ಚರ್ಚೆಯಾಗುತ್ತಿದೆ. ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರವಷ್ಟೇ. ನಾಯಕತ್ವ ಬದಲಾವಣೆ ವಿಚಾರವಾಗಿ ಯಾರೂ ದೆಹಲಿಗೆ ಭೆಟಿ ನೀಡುತ್ತಿಲ್ಲ. ಪದೇ ಪದೇ ಇಂತಹ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದರು.
ಕೋವಿಡ್ ಗೆ ಬಲಿಯಾದವರಿಗೆ ಪರಿಹಾರ ನೀಡಿ; ಸುಪ್ರೀಂ ಆದೇಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ