Politics

*ದಾವಣಗೆರೆ ಪ್ರವಾಸ ಅರ್ಧಕ್ಕೆ ಮೊಟಕುಗೊಳಿಸಿ ದಿಢೀರ್ ದೆಹಲಿಗೆ ತೆರಳಿದ ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ಒಂದೆಡೆ ಯತ್ನಾಳ್ ಟೀಂ ಮತ್ತೆ ದೆಹಲಿ ಪ್ರವಾಸ ಕೈಗೊಳ್ಳುವುದಾಗಿ ಹೇಳಿಕೆ ನೀಡಿದೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಹೈಕಮಾಂಡ್ ಬುಲಾವ್ ನೀಡಿದ ಹಿನ್ನೆಲೆಅಲ್ಲಿ ದಿಢೀರ್ ದೆಹಲಿಗೆ ತೆರಳಿದ್ದಾರೆ.

ಬಿ.ವೈ.ವಿಜಯೇಂದ್ರ ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯಲ್ಲಿ ಪಾಲ್ಗೊಟ್ಟುವ ನಿಟ್ಟಿನಲ್ಲಿ ದಾವಣಗೆರೆಯತ್ತ ಪ್ರಯಾಣಿಸುತ್ತಿದ್ದರು. ನೆಲಮಂಗಲದವರೆಗೆ ಹೋಗಿದ್ದ ವಿಜಯೇಂದ್ರ ಅವರಿಗೆ ವರಿಷ್ಠರು ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ನೆಲಮಂಗಲದಿಂದ ಬೆಂಗಳೂರಿಗೆ ವಾಪಸ್ ಆಗಿರುವ ವಿಜಯೇಂದ್ರ, ಬಳಿಕ ದೆಹಲಿಗೆ ತೆರಳಿದ್ದಾರೆ.

ದಾವಣಗೆರೆಯಲ್ಲಿ ಬೀಡು ಬಿಟ್ಟಿರುವ ಯತ್ನಾಳ್ ಟೀಂ ಮತ್ತೊಂದು ಸುತ್ತಿನ ಸಭೆ ನಡೆಸಿದ್ದು, ಎರಡನೇ ಬಾರಿಗೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುವುದಾಗಿ ತಿಳಿಸಿದೆ. ಇನ್ನೊಂದೆಡೆ ಮಾಜಿ ಸಚಿವ ಶ್ರೀರಾಮುಲು ಕೂಡ ದೆಹಲಿಗೆತೆರಳು ಸಿದ್ಧತೆ ನಡೆಸಿದ್ದಾರೆ. ಈ ನಡುವೆಯೇ ಹೈಕಮಾಂಡ್ ಕರೆ ಮೇರೆಗೆ ವಿಜಯೇಂದ್ರ ದಿಢೀರ್ ಆಗಿ ದೆಹಲಿಗೆ ತೆರಳಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Home add -Advt

Related Articles

Back to top button