Latest

ಅರುಣ್ ಸಿಂಗ್ ಭೇಟಿಯಾದ ಬಿ.ವೈ.ವಿಜಯೇಂದ್ರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಅರುಣ್ ಸಿಂಗ್ ಹಾಗೂ ವಿಜಯೇಂದ್ರ ಭೇಟಿಯಾಗಿ ಚರ್ಚೆ ನಡೆಸಿದ್ದು, ರಾಜ್ಯ ರಾಜಕೀಯ ಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

Home add -Advt

ಅರುಣ್ ಸಿಂಗ್ ಭೇಟಿ ಬೆನ್ನಲ್ಲೇ ವಿಜಯೇಂದ್ರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ನಾಯಕತ್ವ ಬದಲಾವಣೆ ವಿಚಾರ, ಸಿ.ಪಿ.ಯೋಗೇಶ್ವರ್ ದೆಹಲಿ ಭೇಟಿ, ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಇದೀಗ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲವನ್ನು ಕೆರಳಿಸಿದೆ.
ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ್

Related Articles

Back to top button