Politics

*ವಾರದೊಳಗಾಗಿ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀದಬೇಕು ಎಂದು ಬಿಜೆಪಿ ಆಗ್ರಹಿಸಿದೆ.

Home add -Advt

ಮೃತ ಅಧಿಕಾರಿ ಚಂದ್ರಶೇಖರ್ ಅವರ ಶಿವಮೊಗ್ಗದ ನಿವಾಸಕ್ಕೆ ಭೇಟಿ ನೀದಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಿ.ವೈ.ವಿಜಯೇಂದ್ರ, ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಮುಂದೆ ಎರಡು ಬೇಡಿಕೆ ಇಡುತ್ತೇವೆ. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು. ಸರ್ಕಾರಕ್ಕೆ ಒಂದು ವಾರದ ಗಡುವು ಕೊಡುತ್ತೇವೆ. ನಮ್ಮ ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ಅಧಿಕಾರಿ ಬರೆದಿರುವ ಡೆತ್ ನೋಟ್ ನಲ್ಲಿ ಸಚಿವರು ಹಾಗೂ ಕೆಲವರ ಹೆಸರು ಉಲ್ಲೇಖವಾಗಿದೆ. ಗಂಭೀರ ಆರೋಪ ಕೇಳಿಬಂದಿದ್ದರೂ ಸಚಿವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಕಿಡಿಕಾರಿದರು.

Related Articles

Back to top button