Belagavi NewsBelgaum NewsKarnataka NewsPolitics
*ಡಾ.ಪ್ರಭಾಕರ ಕೋರೆ ಅವರನ್ನು ಸನ್ಮಾನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ*


ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವಿಜಯೇಂದ್ರ ಅವರು ಕೆ ಎಲ್ ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರನ್ನು ಸತ್ಕರಿಸಿದರು.
ಭಾರತ ಸರ್ಕಾರದ ಪ್ರತಿಷ್ಠಿತ ನಾಗರಿಕ ಸೇವಾ ಪ್ರಶಸ್ತಿ ಪದ್ಮಶ್ರೀಗೆ ಪುರಸ್ಕೃತರಾದ ಕೋರೆಯವರ ಸೇವೆ ಅಪಾರವಾದದು. ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ನಾಡಿಗೆ ಅದ್ವಿತೀಯ ಕೊಡುಗೆಯನ್ನು ಸಲ್ಲಿಸಿದ್ದಾರೆ. ಸಮಾಜಮುಖಿಯಾಗಿ ಅವರು ನೀಡಿರುವ ಸೇವೆಗೆ ಬೆಲೆಕಟ್ಟಲಾಗದು. ಅವರಿಗೆ ಪದ್ಮಶ್ರೀ ಗೌರವ ಸಂದಿರುವುದು ಹೆಮ್ಮೆಯನ್ನು ತಂದಿದೆ ಎಂದು ವಿಜಯೇಂದ್ರ ಹೇಳಿದರು.
ಕೋರೆ ಅವರನ್ನು ಸತ್ಕರಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕಮಟಗಿಮಠ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ, ಅನಿಲ ಬೆನಕೆ ಮೊದಲಾದವರು ಉಪಸ್ಥಿತರಿದ್ದರು.




