ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ಇಂದು ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ಕೇಂದ್ರ ಸಚಿವರು ಹಾಗೂ ರಾಜ್ಯದ ಕೆಲ ಪ್ರಮುಖ ಶಾಸಕರ ಸಭೆ ನಡೆದಿದೆ.
ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಸಚಿವ ಜೋಶಿ ಅವರ ಸಮ್ಮುಖದಲ್ಲಿ ನಡೆದ ಸಹಜ ಸಭೆಯಲ್ಲಿ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಬಗ್ಗೆ ಟ್ವಿಟ್ ಮಾಡಿರುವ ಸಚಿವ ಜೋಶಿ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ವಿಚಾರಗಳ ಕುರಿತಂತೆ ಚರ್ಚೆ ನಡೆಸಲಾಯಿತು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಭಾಗ್ಯ ಬಹುಪಾಲು ಜನರನ್ನು ತಲುಪಿಯೇ ಇಲ್ಲ. ಅಲ್ಲದೇ, ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಜನಸ್ಪಂದನ ನಡೆಸಿದ್ದು ಆಡಳಿತ ಯಂತ್ರ ಕುಸಿತಕ್ಕೆ ನಿದರ್ಶನವಾಗಿದೆ. ಈ ಜನರಿಗೆ ತಿಳಿಸುವುದೂ ಸೇರಿದಂತೆ ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚಿಸಲಾಯಿತು ಎಂದು ಜೋಶಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದ ಸಂಸದರಾದ ಪಿ.ಸಿ.ಗದ್ದಿಗೌಡ್ರು, ಪಿ.ಸಿ.ಮೋಹನ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ