Kannada NewsKarnataka NewsLatestPolitics

*ಸಚಿವ ಶಿವಾನಂದ ಪಾಟೀಲ್ ರಾಜೀನಾಮೆಗೆ ಬಿ.ವೈ.ವಿಜಯೇಂದ್ರ ಆಗ್ರಹ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಲಮನ್ನಾ ಆಸೆಗಾಗಿ ಪದೇ ಪದೇ ಬರಗಾಲ ಬರಲಿ ಎಂದು ರೈತರು ಆಶಿಸುತ್ತಾರೆ. ಪರಿಹಾರದ ಹಣ ಸಿಗುತ್ತೆ ಎಂದು ಆತ್ಮಹತ್ಯೆ ಮಡಿಕೊಳ್ಳುತ್ತಾರೆ ಎಂದು ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಬಿಜೆಪಿ ನಾಯಕರು ಕೆಂಡ ಕಾರಿದ್ದಾರೆ.

ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪದೇ ಪದೇ ಶಿವಾನಂದ ಪಟೀಲ್ ರೈತರನ್ನು ಅವಮಾನಿಸುತ್ತಿದ್ದಾರೆ. ಸಚಿವರ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂಬುದು ಗೊತ್ತಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಶಿವಾನಂದ ಪಾಟೀಲ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಂತ್ರಿ ಸ್ಥಾನದಲ್ಲಿ ಅವರು ಮುಂದುವರೆಯುವುದು ಬೇಡ. ಮೊದಲು ತಮ್ಮ ಹೇಳಿಕೆಗೆ ಬಹಿರಂಗವಾಗಿ ರೈತರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button