ಪ್ರಗತಿವಾಹಿನಿ ಸುದ್ದಿ: ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಬೀಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ಬೀಳಬಹುದು. ಕಾಂಗ್ರೆಸ್ ನ ಹಲವು ನಾಯಕರು ಹೈಕಮಾಂಡ್ ಭೇಟಿ ಮಾಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಪ್ಲಾನ್ ಮಾಡಿಕೊಂಡು ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿಕೊಂಡಿದ್ದಾರೆ. ಆರೋಪಿ ಸ್ಥಾನದಲ್ಲಿದ್ದಾರೆ. ಅವರು ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಿಎಂ ಭಂಡತನ ಮಾಡ್ತಿದ್ದಾರೆ. ಇದು ಅವರಿಗೂ ಶೋಭೆ ತರುವುದಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಕುರ್ಚಿ ಅಲ್ಲಾಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಈಗ ಜಾತಿಗಣಿತ ವರದಿ ಜಾರಿ ಮಾಡುವುದಾಗಿ ಹೇಳುತ್ತಿದ್ದಾರೆ. ಸಿಎಂ ಅಂದಮೇಲೆ ಎಲ್ಲಾ ವರ್ಗಕ್ಕೂ ನ್ಯಾಯ ಕೊಡಬೇಕು. ಈಗ ಎಮೋಷನಲ್ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ