Politics

*ಯತ್ನಾಳ್ ಗೆ ವಿಜಯೇಂದ್ರ ವಿಡಿಯೋ ಸವಾಲ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ, ಭಿನ್ನ ಮತದ ಬೇಗುದಿ ತಾರಕ್ಕೇರಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಡಿ.ಕೆ.ಶಿವಕುಮಾರ್ ಬಳಿ ಹೋಗಿ ವಿಜಯೇಂದ್ರ 20 ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ನನ್ನ ಬಳಿ ವಿಡಿಯೋ ಇದೆ ಎಂಬ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ವಿಜಯೇಂದ್ರ, ವಿಡಿಯೋ ಇದ್ರೆ ಬಿಡುಗಡೆ ಮಾಡಿ. ಶುಭಮುಹೂರ್ತಕ್ಕೆ ಕಾಯೋದು ಬೇಡ, ತಕ್ಷಣ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದ್ದಾರೆ.

ನನ್ನ ಬಗ್ಗೆ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ ಹಾದಿ ಬೀದಿಯಲ್ಲಿ ನಿಂತು ಮಾತನಾಡುತ್ತಿದ್ದಾರೆ. ಇದರಿಂದ ಅವರಿಗೆ ದೊಡ್ಡ ಪದವಿ ಸಿಗಲಿದೆ ಎಂಬ ಭ್ರಮೆಯಲ್ಲಿದ್ದಾರೆ. ನಮ್ಮ ಕೆಲ ಮುಖಂಡರು ಯತ್ನಾಳ್ ಹೆಗಲ ಮೇಲೆ ಬಂದೂಕು ಇಟ್ಟು ಗುಂಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button