Latest

ಕೊನೆಗೂ ಬಿ.ವೈ.ವಿಜಯೇಂದ್ರ ಕ್ಷೇತ್ರ ನಿರ್ಧಾರ; ಯಡಿಯೂರಪ್ಪ-ವಿಜಯೇಂದ್ರ ಜಂಟಿ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆಗೆ ಕ್ಷೇತ್ರವನ್ನು ಮಾಜಿ ಸಿಎಂ ಖಚಿತಪಡಿಸಿದ್ದಾರೆ.

ಶಿವಮೊಗ್ಗದ ಶಿಕಾರಿಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ತಮ್ಮ ಸ್ವಕ್ಷೇತ್ರವನ್ನು ಮಗ ವಿಜಯೇಂದ್ರಗೆ ಬಿಟ್ಟುಕೊಡುತ್ತೇನೆ. ನಾನು ಕ್ಷೇತ್ರ ಬಿಟ್ಟುಕೊಡುತ್ತಿರುವುದರಿಂದ ನೇರ ಸ್ಪರ್ಧೆಯಿದೆ ಎಂದು ಘೋಷಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಶಿಕಾರಿಪುರದಿಂದಸ್ಪರ್ಧಿಸಲಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಬೇಕು ಎಂದು ಬಹಳ ಒತ್ತಾಯವಿದೆ. ಆದರೆ ಶಿಕಾರಿಪುರ ಕ್ಷೇತ್ರ ಸ್ಥಾನ ತೆರವಾಗುತ್ತಿರುವುದರಿಂದ ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷನಾಗಿ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ತಂದೆಯ ಮಾರ್ಗದರ್ಶನ ಹಾಗೂ ವರಿಷ್ಠರ ಮಾತಿನಂತೆ ನಡೆದುಕೊಳ್ಳುತ್ತೇನೆ. ತಿಂಗಳ ಹಿಂದೆ ಶಿಕಾರಿಪುರದ ಮುಖಂಡರು ತಂದೆಯವರನ್ನು ಭೇಟಿಯಾಗಿ ನನ್ನ ಸ್ಪರ್ಧೆಗೆ ಒತ್ತಡ ಹಾಕಿದರು. ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇಬ್ಬರು ಪಾಲಿಕೆ ಎಂಜಿನಿಯರ್ ಗಳು ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button