Latest

ಚುನಾವಣೆಯಲ್ಲಿ ಸ್ಪರ್ಧೆ; ಬಿ.ವೈ ವಿಜಯೇಂದ್ರ ಮೊದಲ ಬಾರಿ ಅಧಿಕೃತ ಘೋಷಣೆ

 

 

ಪ್ರಗತಿವಾಹಿನಿ ಸುದ್ದಿ; ತುಮಕೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, 2023ರರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿದ್ದೇನೆ. ನಾನು ರಾಜಕೀಯ ಸನ್ಯಾಸಿಯಲ್ಲ. ರಾಜಕೀಯಕ್ಕೆ ಎಂಟ್ರಿ ಕೊಟ್ಟಾಗಿನಿಂದಲೂ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಬಯಕೆ ಹೊಂದಿದ್ದೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ತಿಳಿಸಿದರು.

ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸಲಿದೆ ಎಂದು ಹೇಳುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ವಿಜಯೇಂದ್ರ ಘೋಷಿಸಿದ್ದಾರೆ.
ಒಮಿಕ್ರಾನ್ ಭೀತಿ; ಬೆಳಗಾವಿ ಅಧಿವೇಶನಕ್ಕೂ ಅನಿಶ್ಚಿತತೆ ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button