Belagavi NewsBelgaum NewsKannada NewsKarnataka NewsLatest

*ಕೆ.ಎಲ್.ಇ ಆಸ್ಪತ್ರೆಗೆ ಭೇಟಿ ನೀಡಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯ ವಿಚಾರಿಸಿದ ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕೆ.ಎಲ್.ಇ. ಡಾ ಪ್ರಭಾಕರ್ ಕೋರೆ ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಅವರ ಆರೋಗ್ಯ ವಿಚಾರಿಸಿದರು.

ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಬಿಜೆಪಿಯ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಸಂಸದ ರಮೇಶ್ ಜಿಗಜಿಣಗಿ ಕೆ.ಎಲ್.ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಾವಿ ಲೋಕಸಭಾ ವಿಭಾಗದ ಬಿಜೆಪಿ ನಾಯಕರ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿರುವ ಬಿ.ವೈ.ವಿಜಯೇಂದ್ರ ಮಂಗಳವಾರ ಕೆ.ಎಲ್.ಇ ಆಸ್ಪತ್ರೆಗೆ ಭೇಟಿ ನೀಡಿ ಸಂಸದರ ಆರೋಗ್ಯ ವಿಚಾರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button