Latest

ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

ಈ ಕುರಿಟು ಟ್ವೀಟ್ ಮಾಡಿರುವ ವಿಜಯೇಂದ್ರ, ಅಂಗೈ ಹುಣ್ಣಿಗೆ ಕನ್ನಡಿ ಬೇಕೇ? ಎಂಬಂತೆ ಗಲಭೆಯ ಕ್ರೌರ್ಯಕ್ಕೆ ತುತ್ತಾದ ನಿಮ್ಮ ಶಾಸಕರೇ’ಇದು ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡ’ಎಂದು ಹೇಳಿದ್ದಾರೆ. ಇದರಿಂದ ವಿಚಲಿತರಾಗಿರುವ ನೀವು ಇದೀಗ ಪೋಲಿಸ್ ಅಧಿಕಾರಿಗಳನ್ನು ಬೆದರಿಸುವ ಮಾರ್ಗ ತುಳಿದಿದ್ದೀರಿ, ಇದು ನಿಮ್ಮ ಹತಾಶೆ ಹಾಗೂ ಭಂಡತನವನ್ನು ಸಾಕ್ಷೀಕರಿಸುತ್ತಿದೆ ಎಂದು ತಿರುಗೇಟು ನಿಡಿದ್ದಾರೆ.

ಬೆಂಗಳೂರು ಗಲಭೆಗೆ ಕಾಂಗ್ರೆಸ್ ಕಾರಣವಲ್ಲ, ಪೊಲೀಸರ ವೈಫಲ್ಯವೇ ಕಾರಣ. ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರನ್ನು ಸಿಲುಕಿಸುವ ಹುನ್ನಾರ ನಡೆದಿದೆ. ಇದು ಹೀಗೆಯೇ ಮುಂದುವರೆದರೆ ಬಿಜೆಪಿ ವಿರುದ್ಧವಲ್ಲ, ಪೊಲೀಸರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಬಿ ಕೇರ್ ಫುಲ್ ಮಿಸ್ಟರ್ ಕಮಿಷ್ನರ್. ಕಮಿಷ್ನರ್ ಬಿಜೆಪಿ ಏಜೆಂಟರಂತೆ ವರ್ತಿಸುವುದು ಸರಿಯಲ್ಲ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದರು.

ಈ ಹಿನ್ನಲೆಯಲ್ಲಿ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಬಿ ವೈ ವಿಜಯೇಂದ್ರ ಡಿ. ಕೆ ಶಿವಕುಮಾರ್ ವಿರುದ್ಧ ಗುಡುಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button