ಪ್ರಗತಿವಾಹಿನಿ ಸುದ್ದಿ, ನವದೆಹಲಿ – 1992ರಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣದ ಅಂತಿಮ ತೀರ್ಪು ಇನ್ನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ.
ಸಿಬಿಐ ವಿಶೇಷ ನ್ಯಾಯಾಲಯ ಸುಮಾರು ಸುದೀರ್ಘ ವಿಚಾರಣೆಯ ನಂತರ ಇಂದು ಬೆಳಗ್ಗೆ 10.30ರ ನಂತರ ತೀರ್ಪು ಪ್ರಕಟಿಸಲಿದೆ.
ಮಾಜಿ ಉಪಪ್ರಧಾನಿ ಲಾಲಕೃಷ್ಣ ಅಡ್ವಾಣಿ, ಮಾಜಿ ಸಚಿವ ಮುರಳಿ ಮನೋಹರ ಜೋಶಿ, ಉಮಾಭಾರತಿ ಸೇರಿದಂತೆ ಒಟ್ಟೂ 32 ಪ್ರಮುಖ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ತೀರ್ಪು ಕುತೂಹಲ ಮೂಡಿಸಿದೆ.
ಅಯೋಧ್ಯೆಯ ವಿವಾದದ ತೀರ್ಪು ಈಗಾಗಲೆ ಪ್ರಕಟಗೊಂಡು ರಾಮಮಂದಿರ ನಿರ್ಮಣದ ಕಾರ್ಯ ಆರಂಭವಾಗಿದೆ. ಆದರೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಇನ್ನೂ ಜೀವಂತವಾಗಿಯೇ ಉಳಿದುಕೊಂಡಿದೆ.
ಬಾಂಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ