
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್; ಮಿನಿ ವ್ಯಾನ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ.
ಪ್ರಯಾಣಿಕರನ್ನು ಸಾಗಿಸುತ್ತಿದ್ದ ಮಿನಿ ವ್ಯಾನ್ ಹಾಸನಪಲ್ಲಿ ಗೇಟ್ ಬಳಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 6 ಮಹಿಳೆಯರು ಸೇರಿ 8 ಜನರು ಮೃತಪಟ್ಟಿದ್ದಾರೆ. 20 ಜನರು ಗಾಯಗೊಂಡಿದ್ದಾರೆ.
ಅಪಘಾತದ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಯನ್ನು ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿಯನ್ನು ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಿಸಲಾಗಿದೆ.
ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು: ಹೊಸ ವಿವಾದ ಸೃಷ್ಟಿಸಿದ ಬಿ.ಕೆ.ಹರಿಪ್ರಸಾದ್