Belagavi NewsBelgaum NewsKarnataka News

*ಹೊಟ್ಟೆಯಲ್ಲಿ ಮಗು ಸಾವು, ಚಿಕಿತ್ಸೆ ಸಿಗದೆ ತಾಯಿಯೂ ಸಾವು: ವಿಷಯ ತಿಳಿದ ಪತಿ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ನಿನ್ನೆ ಎಂಟು ತಿಂಗಳ ಗರ್ಭಿಣಿಯ ಮಗು ಹೊಟ್ಟೆಯಲ್ಲೆ ಸಾವನ್ನಪ್ಪಿದ್ದು, ನುರಿತ ವೈದ್ಯರ ಕೊರತೆಯಿಂದ ಗರ್ಭಿಣಿಯನ್ನು ಹೆಚ್ಚಿನ ಚಿಕಿತ್ಸೆಗೆ ಹೊಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ ಚಿಕಿತ್ಸೆ ಫಲಿಸದೆ ಗರ್ಭಿಣಿ ಸಾವನ್ನಪ್ಪಿದ್ದು, ಈ ವಿಷಯ ತಿಳಿದ ಪತಿ ಕೂಡಾ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಎಂಟು ತಿಂಗಳ ಗರ್ಭಿಣಿಯಾಗಿದ್ದ ರಾಧಿಕಾ ಗಡ್ಡಹೊಳಿಗೆ ಮನೆಯಲ್ಲಿ ಫಿಟ್ಸ್ ಬಂದಿತ್ತು. ತಕ್ಷಣ ಕುಟುಂಬಸ್ಥರು ರಾಧಿಕಾಳನ್ನು ಬೆಳಗಾವಿ ಜಿಲ್ಲೆಯ ಹುಕ್ಕೆರಿ ತಾಲೂಕಿನ ಯಮಕನಮರಡಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಬೆಳಗಾವಿಯ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಸ್ಟರಲ್ಲಿ 6 ಬಾರಿ ಫಿಟ್ಸ್ ಗೆ ತುತ್ತಾಗಿದ್ದ ರಾಧಿಕಾಗೆ ಬೆಳಗಾವಿಯ ಬಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.‌ ಬಿಮ್ಸ್ ನಲ್ಲಿ ನುರಿತ ವೈದ್ಯರ ಕೊರತೆಯಿಂದ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆಯಲ್ಲೆ ಮಗು ಸಾವನ್ನಪ್ಪಿದ್ದ ಕಾರಣ ಸ್ಥಿತಿ ಗಂಭೀರವಾಗಿತ್ತು. ಬಳಿಕ ಚಿಕಿತ್ಸೆ ಫಲಿಸದೇ ರಾಧಿಕಾ ಕೂಡ ಮೃತಪಟ್ಟಿದ್ದಾರೆ. ಪತ್ನಿ ಸಾವಿನ ಸುದ್ದಿಯನ್ನು ಕೇಳಿ ಪತಿ ಮಲ್ಲೇಶ್ (25) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button