
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಂದೆಯ ವಾಹನಕ್ಕೆ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಬಲಿಯಾದ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಆನೇಕಲ್ ಬಳಿ ನಡೆದಿದೆ.
ಮನಿಶಾ ಮೃತ ಮಗು. ಸರ್ಜಾಪುರ ಠಾಣಾ ವ್ಯಾಪ್ತಿಯ ಕಾಮನಹಳ್ಳಿ ನಿವಾಸಿ ಬಾಲಕೃಷ್ಣ ತಮ್ಮ ವಾಹನವನ್ನು ರಿವರ್ಸ್ ತೆಗೆದುಕೊಂಡಾಗ ಮಗಳು ವಾಹನಕ್ಕೆ ಅಡ್ಡಬಂದಿದ್ದು, ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಳು.
ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ. ಸರ್ಜಾಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PSI ಹುದ್ದೆ ನೇಮಕಾತಿ ಅಕ್ರಮ ಕೇಸ್; ಐವರು ಆರೋಪಿಗಳ ಜಾಮೀನು ಅರ್ಜಿ ವಜಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ