ಸುರಕ್ಷಿತವಾಗಿ ಮಗು ಹೊರಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಸ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ, ಮಗುವನ್ನು ರಕ್ಷಣಾ ಸಿಬ್ಬಂದಿಗಳು ಸುರಕ್ಷಿತವಾಗಿ ಹೊರತೆಗೆದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೋಟಿ ಕೋಟಿ ಜನರ ಪ್ರಾರ್ಥನೆಗೆ ಫಲ ಸಿಕ್ಕಿದೆ. ದೇವರ ದಯೆಯಿಂದ, ರಕ್ಷಣಾ ಸಿಬ್ಬಂದಿಯ ಶ್ರಮದಿಂದ ಮಗು ಸುರಕ್ಷಿತವಾಗಿ ಹೊರಗೆ ಬಂದಿದೆ. ನಮ್ಮೆಲ್ಲರ ಆತಂಕ ದೂರವಾಗಿದೆ. ರಕ್ಷಣಾ ಸಿಬ್ಬಂದಿಗೆ ನಾನು ಅಭಿನಂದನೆ ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಮನೆ ಬಳಿ ಆಟವಾಡುತ್ತಿದ್ದ 2 ವರ್ಷದ ಮಗು ಸಾತ್ವಿಕ್ ಆಕಸ್ಮಿಕವಾಗಿ ಬುಧವಾರ ಸಂಜೆ ಕೊಳವೆ ಬಾವಿಗೆ ಬಿದ್ದಿತ್ತು. ಮಗು ರಕ್ಷಣೆಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅಂತಿಮವಾಗಿ ಮಗುವನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ. ಕೊಟ್ಯಂತರ ಜನರು ಮಗುವಿನ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದರು.
https://pragativahini.com/operation-successful-satvik-got-out-safely/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ