ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ವಿರುದ್ಧ ದೂರು ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.
ಹಾಸನ ಜಿಲ್ಲೆ ಹೊಳೆನರಸಿಪುರ ನಿವಾಸಿ ಶಾಬಾಝ್ ಉಲ್ಲಾ ಖಾನ್ ಎಂಬಾತ ಯೂಟ್ಯೂಬ್ ಚಾನಲ್ ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ಮಾತನಾಡಿದ್ದು, ಕೀಳುಮಟ್ಟದ ಪದಪ್ರಯೋಗ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿದ್ದಲ್ಲದೇ ಸಿಎಂ ವಿರುದ್ಧ ಅವಾಚ್ಯ ಶಬ್ದ ಬಳಕೆ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ಆರೋಪಿ ಶಾಬಾಝ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಡಿಸಿಪಿ ಅನುಚೇತ್ ಅವರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಹಿಜಾಬ್ ಧರಿಸಿ ಬಂದ್ರೆ SSLC ಪರೀಕ್ಷೆಗಿಲ್ಲ ಅವಕಾಶ
ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್; ಈ ಔಷಧಿಯ ಬೆಲೆ ಹೆಚ್ಚಳ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ