*ಬಡಾಲ ಅಂಕಲಗಿಯಲ್ಲಿ ಕುಂಭೋತ್ಸವ, ಆರತಿ ಪೂಜೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬಡಾಲ ಅಂಕಲಗಿ ಗ್ರಾಮದ ಆರಾಧ್ಯ ದೈವ ಹಾಗೂ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಸದ್ಗುರು ಸದಾನಂದ ಮಹಾರಾಜರ ರಥದ ಅಚ್ಚು ಹಾಗೂ ತೇರಿನ ಚಕ್ರಗಳ ಪೂಜೆಯ ಹಿನ್ನೆಲೆಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಗ್ರಾಮದ ಮಹಿಳೆಯರು ಭಕ್ತಿಭಾವದಿಂದ ಹಮ್ಮಿಕೊಂಡಿದ್ದ ಕುಂಭೋತ್ಸವ ಹಾಗೂ ಆರತಿ ಪೂಜೆಯಲ್ಲಿ ಮಾಜಿ ಸಚಿವರು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಮುತ್ತೈದೆಯರು ಸಾಂಪ್ರದಾಯಿಕವಾಗಿ ಕುಂಭಗಳನ್ನು ಹೊತ್ತುಕೊಂಡು ಭಕ್ತಿಗೀತೆ ಹಾಗೂ ಮಂಗಳ ವಾದ್ಯಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. … Continue reading *ಬಡಾಲ ಅಂಕಲಗಿಯಲ್ಲಿ ಕುಂಭೋತ್ಸವ, ಆರತಿ ಪೂಜೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*