Kannada NewsKarnataka NewsLatest
*ಬಡೆಕೋಳ ಮಠ ಬಳಿ ಮತ್ತೊಂದು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ತಾಲೂಕಿನ ಬಡೆಕೋಳ ಮಠದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮಳೆಯ ನಡುವೆ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿ ಹೊಡೆದ ಪರಿಣಾಮ ಪುಣೆ, ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತಕ್ಕೀಡಾದ ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ನಿರಂತರ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಜಾರುವಂತಾಗಿರುವುದು ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಈ ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಉದ್ದವಾದ ವಾಹನಗಳ ಸರತಿ ನಿರ್ಮಾಣವಾಗಿ ಪ್ರಯಾಣಿಕರು ಪರದಾಡುವಂತಾಯಿತು.



