
ಪ್ರಗತಿವಾಹಿನಿ ಸುದ್ದಿ: ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಈ ದುರಂತ ಸಂಭವಿಸಿದೆ. 11 ವರ್ಷದ ಬಾಲಕ ದರ್ಶನ್ ಲಾತೂರ್ ಮೃತ ಬಾಲಕ. ಘಟನೆಯಲ್ಲಿ ಇನ್ನೋರ್ವ ಬಾಲಕ ಶ್ರೀಶೈಲ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇಂದು ಮುಂಜಾನೆ ಮನೆ ಮೇಲ್ಚಾವಣಿ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.