ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೇಂದ್ರದಿಂದ ರೈತರ ಆದಾಯ ದ್ವಿಗುಣಗೊಳಿಸುವ ಕೆಲಸ ನಡೆದಿದೆ. ಕಿಸಾನ್ ಸಮ್ಮಾನ್ ಯೋಜನೆ ನಾವು ಜಾರಿಗೆ ತಂದಿದ್ದೇವೆ. ರೈತ ಪರವಾದ ಕೆಲಸದಲ್ಲಿ ಮುಖ್ಯಮಂತ್ರಿ ಬಿಎಸ್ ವೈ ಸರ್ಕಾರ ಹಿಂದೆ ಮುಂದೆ ನೋಡಿಲ್ಲ. ಕೇಂದ್ರ ಸರ್ಕಾರ ಜಾರಿಗೊಳಿಸಿದ ಎಲ್ಲಾ ಯೋಜನೆಗಳನ್ನು ರೈತರಿಗೆ ತಲುಪಿಸಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿಯಲ್ಲಿ ಮಾತನಾಡಿದ ಅಮಿತ್ ಶಾ, ಮೋದಿ ಪ್ರಧಾನಿಯಾಗಲು ಕರ್ನಾಟಕದ ಕೊಡುಗೆ ಮಹತ್ವದ್ದಾಗಿದೆ. ಎಥೆನಾಲ್ ಉತ್ಪಾದನೆಗೆ ಪ್ರಧಾನಿ ಮೋದಿ ಯೋಜನೆ ನೀಡಿದ್ದಾರೆ. ಇದರ ಜೊತೆಗೆ ಮೋದಿಜಿ ಕನಸನ್ನು ಮುರುಗೇಶ್ ನಿರಾಣಿ ನನಸು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಶಾ, ನಾವು ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿದಾಗ ಕಾಂಗ್ರೆಸ್ ನಾಯಕರು ನಗುತ್ತಿದ್ದರು. ಈಗಗಾಲೇ ನಾವು ರೈತರ ಆದಾಯ ದ್ವಿಗುಣಗೊಳಿಸುವ ಕೆಲಸ ಮಾಡುತ್ತಿದ್ದೇವೆ. ಆದರೆ ಕಾಂಗ್ರೆಸ್ ರೈತರನ್ನು ಮುಂದಿಟ್ಟುಕೊಂಡು ಟೀಕೆ ಮಾಡುತ್ತಿದೆ ಎಂದರು.
Inauguration and foundation stone laying ceremony of various farmer friendly projects being set-up by MRN group in Bagalkot, Karnataka. https://t.co/PtY5e290oO
— Amit Shah (@AmitShah) January 17, 2021
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ