
ಪ್ರಗತಿವಾಹಿನಿ ಸುದ್ದಿ: ಮೈಸೂರು ಹಳೇ ಕೋರ್ಟ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಬೆನ್ನಲ್ಲೇ ಇದೀಗ ಮತ್ತೊಂದು ಜಿಲ್ಲಾ ಕೋರ್ಟ್ ಗೂ ಬಾಂಬ್ ಬೆದರಿಕೆ ಕರೆ ಬಂದಿದೆ.
ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಕೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ನ್ಯಾಯಾಧೀಶರು, ಕೋರ್ಟ್ ಸಿಬ್ಬಂದಿಗಳು ಕೋರ್ಟ್ ನಿಂದ ಹೊರ ಬಂದಿದ್ದಾರೆ.
ಕೋರ್ಟ್ ಆವರಣದಲ್ಲಿ ಜನರು ಜಮಾವಣೆಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ ಭೇಟಿ ನೀಡಿ ಕೋರ್ಟ್ ನಲ್ಲಿ ಪರಿಶೀಲನೆ ನಡೆಸಿದೆ.




