Latest

ಯುವತಿಯರನ್ನು ಚುಡಾಯಿಸಿದ್ದಕ್ಕೆ ಆರಂಭವಾದ ಸಂಘರ್ಷ; ಕೆರೂರು ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ನಡೆದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಲು ಹಿಂದೂ-ಮುಸ್ಲಿಂ ಯುವಕರ ನಡುವೆ ನಡೆದ ಸಂಘರ್ಷ ಕಾರಣ ಎಂದು ತಿಳಿದುಬಂದಿದೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವತಿಯರನ್ನು ಚುಡಾಯಿಸಿದ್ದೇ ಗಲಾಟೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾರೂ ಕೂಡ ಯಾವುದೇ ತಪ್ಪು ಸಂದೇಶಗಳನ್ನು ರವಾನೆ ಮಾಡಬಾರದು ಎಂದು ಎಸ್ ಪಿ ಜಯಪ್ರಕಾಶ್ ತಿಳಿಸಿದ್ದಾರೆ.

ಬಂದೋಬಸ್ತ್ ಗಾಗಿ ಕೆರೂರು ಪಟ್ಟಣದಲ್ಲಿ 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ 18 ಜನರನ್ನು ವಶಕ್ಕೆ ಪಡೆಯಲಾಗಿದ್ದು, ನಾಪತ್ತೆಯಾದ 15ಕ್ಕೂ ಹೆಚ್ಚು ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ನಾಲ್ಕು ಪ್ರತ್ಯೇಕ ಕೇಸ್ ದಾಖಲಿಸಲಾಗಿದೆ. ನಿನ್ನೆ ಸಂಜೆ ಕೆರೂರು ಪಟ್ಟನದಲ್ಲಿ ಎರಡು ಕೋಮೊನ ಯುವಕರ ನಡುವೆ ಆರಂಭವಾದ ಗಲಾಟೆ ತಾರಕ್ಕೇರಿತ್ತು. ಮೂವರಿಗೆ ಚಾಕು ಇರಿಯಲಾಗಿದ್ದು, ಮತ್ತೋರ್ವ ಗಲಾಟೆ ವೇಳೆ ಗಂಭೀರವಾಗಿ ಗಾಯಗೊಂಡಿದ್ದ. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವ್ಯಾಹತ ಮಳೆಗೆ ಗುಡ್ಡ ಕುಸಿತ: ಮೂವರು ಕಾರ್ಮಿಕರ ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button