Latest

ಗುಂಪು ಘರ್ಷಣೆಯಲ್ಲಿ ಮೂವರಿಗೆ ಚಾಕು ಇರಿತ; ಕೆರೂರು ಪಟ್ಟಣ ಉದ್ವಿಘ್ನ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಮೂವರಿಗೆ ಚಾಕು ಇರಿದಿರುವ ಘಟನೆ ಬೆಳಕಿಗೆ ಬಂದಿದೆ.

ಅರುಣ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ ಹಾಗೂ ಯಮನೂರ ಚುಂಗಿನ್ ಎಂಬುವವರಿಗೆ ಚಾಕು ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಲಾಗಿದೆ.

Home add -Advt

ಕೆರೂರು ಪಟ್ಟಣದಲ್ಲಿ ಏಕಾಏಕಿ ಈ ದುರ್ಘಟನೆ ಸಂಭವಿಸಿದ್ದು, ಗುಂಪು ಘರ್ಷಣೆಗೆ ಕಾರಣ ತಿಳಿದುಬಂದಿಲ್ಲ. ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ.
ಇಬ್ಬರು ಕೇಂದ್ರ ಸಚಿವರ ದಿಢೀರ್ ರಾಜೀನಾಮೆ

Related Articles

Back to top button