Latest

2012ರಲ್ಲಿ ನಡೆದಿದ್ದ ಹತ್ಯೆ ಪ್ರಕರಣ; 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: 2012ರಲ್ಲಿ ಶಿರೂರು ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಬಾಗಲಕೋಟೆ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.

2012ರ ಫೆಬ್ರವರಿ 1ರಂದು ಶಿರೂರು ಸರಕಾರಿ ಪ್ರಾಥಮಿಕ ಶಾಲೆ ಎಸ್ ಡಿಎಮ್ ಸಿ ಅಧ್ಯಕ್ಷರ ಆಯ್ಕೆ ವೇಳೆ ಯಲ್ಲಪ್ಪ ಗಾಳಿ (55) ಎಂಬುವವರ ಕೊಲೆ ನಡೆದಿತ್ತು. ಯಲ್ಲಪ್ಪ ಎಂಬುವವರ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕುಟುಂಬದವರನ್ನೇ ಹತ್ಯೆಗೈಯ್ಯುವ ಯತ್ನ ನಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯಲ್ಲಪ್ಪ ಗಾಳಿ ಜೀವನ್ಮರಣದ ಹೋರಾಟ ನಡೆಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

Home add -Advt

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7 ಅಪರಾಧಿಗಳಿಗೆ ಬಾಗಲಕೋಟೆ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
12 ಆರೋಪಿಗಳ ಗಾಂಜಾ ಸೇವನೆ ದೃಢ

Related Articles

Back to top button