Kannada NewsKarnataka NewsLatest
*BREAKING: ರಸ್ತೆಬದಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್: ನಡೆದು ಹೋಗುತ್ತಿದ್ದ ವ್ಯಕ್ತಿ ಸುಟ್ಟು ಕರಕಲು*

ಪ್ರಗತಿವಾಹಿನಿ ಸುದ್ದಿ: ರಸ್ತೆಬದಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ನಡೆದು ಹೋಗುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘೋರ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ನಗರದ ನವನಗರ 49ನೇ ಸೆಕ್ಟರ್ ನಲ್ಲಿ ಈ ದುರಂತ ಸಂಭವಿಸಿದೆ. ರಾಜಸ್ಥಾನ ಮೂಲದ ವ್ಯಕ್ತಿ ಮೃತ ದುರ್ದೈವಿ. ಮೃತರ ಗುರುತು ಪತ್ತೆಯಾಗಿಲ್ಲ.
ರಸ್ತೆಬದಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿದ್ದು, ವಿದ್ಯುತ್ ಪ್ರವಹಿಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸುಟ್ತು ಕರಕಲಾಗಿದ್ದಾರೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



