Latest

ಕ್ವಾರಂಟೈನ್ ಗೆ ಹೆದರಿ ವಿಷಸೇವಿಸಿದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೇ ಸಾವು

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಕ್ವಾರಂಟೈನ್‍ಗೆ ಹೆದರಿದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಮೃತನನ್ನು ತುಕಾರಾಮ ಪವಾರ್ (40) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಯಾದಗಿರಿ ಜಿಲ್ಲೆ ಜುಮಲಾಪುರ ತಾಂಡಾದವರು.

ಮೇ15 ರಂದು ಮಹಾರಾಷ್ಟ್ರದ ರತ್ನಗಿರಿಯಿಂದ ತುಕರಾಮ ಊರಿಗೆ ಬಂದಿದ್ದರು. ಮೇ 16ರ ಬೆಳಗ್ಗೆ ವಿಷಯ ತಿಳಿದು ಆಶಾ ಕಾರ್ಯಕರ್ತೆಯರು, ಪಂಚಾಯ್ತಿಯವರು ಕ್ವಾರಂಟೈನ್ ಆಗಬೇಕು. 14 ದಿನ ಕ್ವಾರಂಟೈನ್ ಗೆ ಇರಬೇಕು ಎಂದು ಸೂಚಿಸಿದ್ದರು. ಇಲ್ಲವಾದಲ್ಲಿ ನಿನ್ನ ಸ್ವಂತ ಊರಿಗೆ ತೆರಳುವಂತೆ ಸಲಹೆ ನೀಡಿದ್ರು. ಈ ವೇಳೆ ತುಕರಾಮ ಕ್ವಾರಂಟೈನ್ ಒಳಗಾಗಲು ನಿರಾಕರಿಸಿದ್ದು, ಹೆದರಿ ವಿಷ ಸೇವಿಸಿದ್ದರು.

ತಕ್ಷಣ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Home add -Advt

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button