Latest

ಪುರಸಭೆ ಅಧ್ಯಕ್ಷೆ ಪತಿ ಬಂಧನ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೇಟ್ ನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಪುರಸಭೆ ಅಧ್ಯಕ್ಷೆ ಪತಿಯನ್ನು ಬಂಧಿಸಿದ್ದಾರೆ.

ಮಹಾಲಿಂಗಪುರ ಪುರಸಭೆ ಅಧ್ಯಕ್ಷೆ ಸ್ನೇಹಲ್ ಅಂಗಡಿ ಪತಿ ಶಿವಾನಂದ ಅಂಗಡಿ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೇಟ್ ಅಕ್ರಮ ಮಾರಾಟ ದಂಧೆಯಲ್ಲಿ ಶಿವಾನಂದ ಹೆಸರು ಕೇಳಿಬಂದಿತ್ತು.

Home add -Advt

ಮಹಾಲಿಂಗಪುರದ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶಿವಾನಂದ ಅವರನ್ನು ಬಂಧಿಸಿದ್ದಾರೆ. ಬರೋಬ್ಬರಿ 14 ಟನ್ ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್ ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರ‍ಾಟಕ್ಕೆ ಮುಂದಾಗಿದ್ದರು ಎಂಬ ಆರೋಪದಡಿ ಶಿವಾನಂದ ವಿರುದ್ಧ 2020ರಲ್ಲಿ ಕೇಸ್ ದಾಖಲಾಗಿತ್ತು.
ಕೊರೊನಾದಿಂದ ಗುಣಮುಖರಾದ ಮಕ್ಕಳಲ್ಲಿ ಕಂಡುಬರುತ್ತಿದೆ MISC ಸಮಸ್ಯೆ

Related Articles

Back to top button