*ಕರ್ತವ್ಯ ನಿರತ ರಾಜ್ಯದ ಯೋಧ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ ಮೂಲದ ಯೋಧರೊಬ್ಬರು ಕರ್ತವ್ಯನಿರತರಾಗಿದ್ದಾಗ ರಾಜಸ್ಥಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದವರಾದ ಮಾಗೊಂಡಯ್ಯ ಅವರು 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ಮಕ್ಕಳ ಜೊತೆ ರಾಜಸ್ಥಾನದಲ್ಲಿಯೇ ವಾಸವಾಗಿದ್ದಾರೆ. ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜ.15ರಂದು ನಂದಿಕೇಶ್ವರ ಗ್ರಾಮದಲ್ಲಿ ಯೋಧನ ಅಂತ್ಯಕ್ರಿಯೆ ನಡೆಯಲಿದೆ.Home add -Advt *ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ … Continue reading *ಕರ್ತವ್ಯ ನಿರತ ರಾಜ್ಯದ ಯೋಧ ಹೃದಯಾಘಾತದಿಂದ ಸಾವು*