*BREAKING: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಲ್ಲು ತೂರಾಟ ನಡೆಸಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ತನ್ವೀರ್ ಹವಾಲ್ದಾರ್, ಸರ್ಫರಾಜ್ ಚಾವುಸ್, ಫಯಾಜ್, ಸದ್ದಾಮ್ ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಎಸ್ ಪಿ ಮಾಹಿತಿ ನೀಡಿದ್ದಾರೆ.
ಕಲ್ಲು ತೂರಾಟದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಓರ್ವ ಸಾರ್ವಜನಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲು ತೂರಾಟದ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆಯೂ ನಡೆದಿದೆ.
ಪರಿಸ್ಥಿತಿ ನಿಯಂತ್ರಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




