*BREAKING: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಲ್ಲು ತೂರಾಟ ನಡೆಸಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ತನ್ವೀರ್ ಹವಾಲ್ದಾರ್, ಸರ್ಫರಾಜ್ ಚಾವುಸ್, ಫಯಾಜ್, ಸದ್ದಾಮ್ ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಎಸ್ ಪಿ ಮಾಹಿತಿ ನೀಡಿದ್ದಾರೆ. ಕಲ್ಲು ತೂರಾಟದಲ್ಲಿ ಓರ್ವ ಪೊಲೀಸ್​​ ಸಿಬ್ಬಂದಿ ಹಾಗೂ ಓರ್ವ ಸಾರ್ವಜನಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading *BREAKING: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳು ಅರೆಸ್ಟ್*