Latest

ಭೀಕರ ಕಾರು ಅಪಘಾತ; ಶಾಲೆಯಿಂದ ವಾಪಸ್ಸಾಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಸಾವು

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಐಹೊಳೆ ಬಳಿಯ ಕ್ಯಾದಿಗೇರಿ ಕ್ರಾಸ್ ಬಳಿ ನಡೆದಿದೆ.

8ನೇ ತರಗತಿ ಓದುತ್ತಿದ್ದ ನೇತ್ರಾವತಿ ರಗಟಿ (14) ಹಾಗೂ ಅಂಜಲಿ ಸೂಡಿ (14) ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳು ಐಹೊಳೆಯಿಂದ ಚಿಲ್ಲಾಪುರಕ್ಕೆ ಹೊರಟಿದ್ದರು. ಈ ವೇಳೆ ಎದುರಿನಿಂದ ಬಂದ ಕಾರು ವಿದ್ಯಾರ್ಥಿಗಳಿಗೆ ಡಿಕ್ಕಿಹೊಡೆದು ಈ ದುರಂತ ಸಂಭವಿಸಿದೆ.

ಶೀತಲಾ ಶ್ರೀಪಾದ ಭಟ್ ಗೆ ಕೆನಡಾದ ಲಿಟರರಿ ಅವಾರ್ಡ

Home add -Advt

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button