ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಗ್ರಾಮೀಣ ಭಾಗದ ಯುವಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಾಗಲಕೋಟ ನಗರದ ಹೊರವಲಯದ ತೇಜಸ್ ಅಂತರಾಷ್ಟ್ರೀಯ ಶಾಲೆಯಲ್ಲಿ ರವಿವಾರ, ಮಾ.12 ರಂದು ಬೃಹತ್ ಉದ್ಯೋಗ ಆಯೋಜಿಸಲಾಗಿದೆ ಎಂದು ಎಂ.ಆರ್.ಎನ್ (ನಿರಾಣಿ) ಫೌಂಡೇಶನ್ ಕಾರ್ಯನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿ ಹೇಳಿದ್ದಾರೆ.
ಈ ಕುರಿತು ಪ್ರಕಟನೆಯಲ್ಲಿ ಈ ವಿಷಯ ತಿಳಿಸಿದ ಅವರು ಎಂ.ಆರ್.ಎನ್. (ನಿರಾಣಿ) ಫೌಂಡೇಶನ್, ಬಿಜೆಪಿ ಬೀಳಗಿ ಯುವ ಘಟಕ ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಈ ಉದ್ಯೋಗಮೇಳವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಲಿದ್ದಾರೆ.
100ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿದ್ದು, 5 ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ. ಎಂದು ಅವರು ಹೇಳಿದರು.
ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ರೀತಿಯ ಪದವಿ ಪಡೆದ ಉದ್ಯೋಗಾಕಾಂಕ್ಷಿಗಳಿಗೆ ಅರ್ಹತೆಗನುಗುಣವಾಗಿ ವಿವಿಧ ಅವಕಾಶ ಲಭ್ಯವಿದ್ದು ಆಸಕ್ತರು ತಮ್ಮ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲೆಗಳೊಂದಿಗೆ ಭಾಗವಹಿಸಿ ಈ ಉದ್ಯೋಗಮೇಳದ ಪ್ರಯೋಜನ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 9071772722, 9071776454 ಗೆ ಸಂಪರ್ಕಿಸಬಹುದು ಎಂದು ಸಂಗಮೇಶ ನಿರಾಣಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ