Kannada NewsKarnataka NewsLatest

*ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಇಣುಕಿ ನೋಡಿದ ಆರೋಪ: ಯುವಕನ ಮೇಲೆ ಸ್ಥಳೀಯರಿಂದ ಹಲ್ಲೆ: ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ಹೆಣ್ಣುಮಕ್ಕಳು ಬಟ್ಟೆ ಬದಲಿಸುತ್ತಿದ್ದುದನ್ನು ಕುಡಕಿಯಿಂದ ಇಣುಕಿ ನೋಡುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದು, ಈ ವೇಳೆ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.’

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಸಾವಳಗಿ ಗ್ರಾಮದ ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ.

ಸಾವಳಗಿ ಗ್ರಾಮ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಇರುವ ಸಾವಳಗಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಸುದೀಪ್ ಪಾಂಗೆ ವಿದ್ಯಾರ್ಥಿನಿಯರು ಕಾರ್ಯಕ್ರಮಕ್ಕಾಗಿ ಬಟ್ಟೆ ಬದಲಾಯಿಸುತ್ತಿದ್ದ ಇಣುಕಿ ನೋಡಿದ್ದಾನಂತೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಯುವಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ರಾಜು ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ಎಂಬ ಮೂವರು ಯುವಕನನ್ನು ಹಿಡಿದು ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಯುವಕ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲ್ಕಾಗಿದ್ದ. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

Home add -Advt

ಯುವಕನ ಸಹೋದರ ರಾಜು ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ವಿರುದ್ಧ ಜಾತಿ ನಿಂದನೆ ಹಾಗೂ ಹಲ್ಲೆ ನಡೆಸಿ ಕೊಲೆ ಎಂದು ಸಾವಳಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


Related Articles

Back to top button