Kannada NewsKarnataka NewsLatest

*ಬೈಕಂಪಾಡಿಯಲ್ಲಿ ಬೆಂಕಿ ಅವಘಡ: ಸುಗಂಧದ್ರವ್ಯ ತಯಾರಿಕಾ ಕಂಪನಿ ಸುಟ್ಟು ಕರಕಲು*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಮೇಜಾನ್ ಸುಗಂಧದ್ರವ್ಯ ತಯಾರಿಕಾ ಕಂಪನಿಗೂ ಬೆಂಕಿ ವ್ಯಾಪಿಸಿದ್ದು, ಕಂಪನಿ ಸುಟ್ಟು ಕರಕಲಾಗಿದೆ.

ಸುಗಂಢದ್ರವ್ಯ ತಯಾರಿಕಾ ಕಂಪನಿಯ ಇಡೀ ಘಟಕ ಬೆಂಕಿ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button