
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರದಲ್ಲಿ ಸದ್ದು ಮಾಡಿದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ನಟಿ ರನ್ಯಾರಾವ್‌ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ದುಬೈನಿಂದ 12 ಕೋಟಿ ಮೌಲ್ಯದ 14 ಕೆ.ಜಿ ಚಿನ್ನ ಕಳ್ಳ ಸಾಗಣೆ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳಿಂದ ಅರಸ್ಟ್ ಆಗಿದ್ದ ನಟಿ ರನ್ಯಾರಾವ್ ಸೇರಿ ಮೂವರು ಆರೋಪಿಗಳಿಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಮಾರ್ಚ್ 3ರಂದು ಬೆಂಗಳೂರಿಗೆ ಆಗಮಿಸಿದ್ದ ರನ್ಯಾರಾವ್‌ರನ್ನು ಕಂದಾಯ ಗುಪ್ತಚರ ಅಧಿಕಾರಿಗಳು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದರು. ರನ್ಯಾ ತನ್ನ ದೇಹದ ಭಾಗಗಳಲ್ಲಿ ಅಂಟಿಸಿಕೊಂಡಿದ್ದ 12.56 ಕೋಟಿ ಮೌಲ್ಯದ 14.21 ಕೆ.ಜಿ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದ್ದವು. ಹೀಗಾಗಿ, ರನ್ಯಾಳನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದರು.




