ಪ್ರಗತಿವಾಹಿನಿ ಸುದ್ದಿ, ನವದೆಹಲಿ -ಕಳೆದ ಸುಮಾರು 50 ದಿನಗಳಿಂದ ಜಾರಿ ನಿರ್ದೇಶನಾಲಯದ ಬಂಧನದಲ್ಲಿದ್ದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಸಂಜೆಯೊಳಗೆ ಶಿವಕುಮಾರ ತಿಹಾರ್ ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ.
ಡಿ.ಕೆ.ಶಿವಕುಮಾರ ಅವರಿಗೆ ಅನಾರೋಗ್ಯವಿದೆ. ವಿಚಾರಣೆಗೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ. ಮುಂದೆಯೂ ಸಹಕರಿಸಲಿದ್ದಾರೆ. ಅವರದ್ದೂ ಬಂಧಿಸುವಂತಹ ಪ್ರಕರಣವೇ ಅಲ್ಲದಿದ್ದರೂ ಬಂಧಿಸಲಾಗಿದೆ ಎಂದು ಶಿವಕುಮಾರ ಪರ ವಕೀಲರು ವಾದಿಸಿದ್ದರು.
ವಿದೇಶಕ್ಕೆ ತೆರಳಲು ಅನುಮತಿ ಪಡೆಯಬೇಕು. 25 ಲಕ್ಷ ರೂ. ವಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟ್ ನೀಡಬೇಕು ಎನ್ನುವ ಷರತ್ತಿನೊಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಶಿವಕುಮಾರ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಅವರ ಬೆಂಬಲಿಗರ ಹರ್ಷ ಮುಗಿಲು ಮುಟ್ಟಿದೆ. ನವದೆಹಲಿಯಲ್ಲಿರುವ ಅವರ ಬೆಂಬಲಿಗರು ಹಾಗೂ ಕರ್ನಾಟಕದ ಹಲವೆಡೆ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ರಾಮನಗರ, ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.
ನ್ಯಾಯಾಂಗ ಬಂಧನಕ್ಕೆ ಡಿ.ಕೆ.ಶಿವಕುಮಾರ
ಅಕ್ಟೋಬರ್ 25ರ ವರೆಗೆ ಡಿ.ಕೆ.ಶಿವಕುಮಾರ್ ಗೆ ನ್ಯಾಯಾಂಗ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ