*ವಿಭಜನೆ ಮಾಡುವುದಾದರೆ ಬೈಲಹೊಂಗಲವನ್ನು ಜಿಲ್ಲೆಯನ್ನಾಗಿ ಮಾಡುವಂತೆ ಸಿಎಂ ಭೇಟಿಯಾದ ನಿಯೋಗ*


ಪ್ರಗತಿವಾಹಿನಿ ಸುದ್ದಿ: ಅಖಂಡವಾದ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಬಾರದು, ಒಂದೊಮ್ಮೆ ವಿಭಜಿಸುವ ಅನಿವಾರ್ಯತೆ ಸೃಷ್ಟಿಯಾದರೆ ಬೈಲಹೊಂಗಲವನ್ನು ಜಿಲ್ಲೆಯನ್ನಾಗಿ ಬೈಲಹೊಂಗಲ ಶಾಸಕರಾದ ಮಹಂತೇಶ್ ಕೌಜಲಗಿ ಅವರ ನೇತೃತ್ವದ ನಿಯೋಗ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿತು.
ವಿವಿಧ ಮಠಾಧೀಶರೊಂದಿಗೆ ಆಗಮಿಸಿದ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ನಾಡು ನುಡಿಯ ಹಿತದೃಷ್ಟಿಯಿಂದ ಜಿಲ್ಲೆಯನ್ನು ವಿಭಜನೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಒಂದೊಮ್ಮೆ ವಿಭಜಿಸುವ ಅನಿವಾರ್ಯತೆ ಸೃಷ್ಟಿಯಾದರೆ ಬೈಲಹೊಂಗಲವನ್ನು ಜಿಲ್ಲೆಯನ್ನಾಗಿ ಮಾಡುವಂತೆ ಒತ್ತಾಯಿಸಿದರು.
ಶಾಸಕ ಮಹಾಂತೇಶ ಕೌಜಲಗಿಯಲ್ಲದೆ, ಮಾಜಿ ಶಾಸಕ ವಿಶ್ವನಾಥ ಪಾಟೀಲ, ಶಂಕರ ಮಾಡಲಗಿ, ಶಿರಂಜನ ಬೋಳಣ್ಣವರ್, ವಿವಿಧ ಮಠಾಧೀಶರು ನಿಯೋಗದಲ್ಲಿದ್ದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಶೋಕ ಪಟ್ಟಣ ಮೊದಲಾದವರು ಇದ್ದರು.




