ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಸಂಘಟನೆ ಆರೋಪಿ ಕಾರ್ಯಕರ್ತನನ್ನು ಬಜರಂಗದಳದಿಂದ ತೆಗೆದುಹಾಕಿದೆ.
ಈ ಕುರಿತು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಳಸ ಪ್ರಖಂಡ ಸಂತೋಷ್ ಬೆಟ್ಟಿಗೆರೆ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದು, ಬಜರಂಗದಳ ಸಂಸೆ ಘಟಕದ ಸಂಯೋಜಕರಾಗಿದ್ದ ನಿತೇಶ್ ಕಾರ್ಗದ್ದೆ ನಡತೆಯಲ್ಲಿ ಕೆಲವು ಲೋಪ ದೋಷಗಳಿದ್ದು ಸಂಘಟನೆ ಸಿದ್ಧಾಂತಕ್ಕೆ ವಿರುದ್ಧವಾಗಿದ್ದ ಕಾರಣ ಸಂಘಟನೆಯ ಜವಾಬ್ದಾರಿ ಹಾಗೂ ಸಂಘಟನೆಯಿಂದ ತೆರವುಗೊಳಿಸಲಾಗಿದೆ. ಈ ಬಗ್ಗೆ ಇಂದು ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಇನ್ಮುಂದೆ ಬಜರಂಗದಳಕ್ಕೂ ನಿತೇಶ್ ಗೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಬಜರಂಗದಳ ಕಾರ್ಯಕರ್ತನಾಗಿದ್ದ ಆರೋಪಿ ನಿತೇಶ್ ಕಿರುಕುಳಕ್ಕೆ ಬೇಸತ್ತು ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಜನವರಿ 10ರಂದು ಕ್ರಿಮಿನಾಶಕ ಸೇವಿಸಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಜ.14ರಂದು ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.
*ಹಿಂಡಲಗಾ ಜೈಲಿನ ಕೈದಿಯಿಂದ ಕೇಂದ್ರ ಸಚಿವರಿಗೆ ಬೆದರಿಕೆ ಕೇಸ್; ಖತರ್ನಾಕ್ ಕೈದಿಯ ಹಿನ್ನೆಲೆ ಪತ್ತೆ*
https://pragati.taskdun.com/nitin-gadkaritreat-casehindalaga-jailprisonerputturu/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ