Kannada NewsKarnataka NewsLatest

*ಬಜರಂಗದಳ ಕಾರ್ಯಕರ್ತರಿಂದ ಪೊಲಿಸರ ಮೇಲೆ ಹಲ್ಲೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಶೋಭಾಯಾತ್ರೆ ವೇಳೆ ಬಜರಂಗದಳ ಕಾರ್ಯಕರ್ತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ 7 ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಚಿಕ್ಕಮಗಳೂರಿನ ಆಲ್ದೂರು ಪಟ್ಟಣದಲ್ಲಿ ಶೋಭಾಯಾತ್ರೆ ವೇಳೆ ಮಸೀದಿ ಮುಂದೆಯೇ ಪಟಾಕಿ ಹಚ್ಚಿದ ಕಾರ್ಯಕರ್ತರನ್ನು ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Home add -Advt

ಮಸೀದಿ ಮುಂದೆ ಪಟಾಕಿ ಸಿಡಿಸದಂತೆ ಪೊಲೀಸರ ಸೂಚನೆ ಇದ್ದರೂ ವಿರೋಧದ ನಡುವೆ ಪಟಾಕಿ ಸಿಡಿಸಿದ್ದಾರೆ. ಇದನ್ನು ತಡೆಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಏಕಾಏಕಿ ಪಟಾಕಿ ಸಿಡಿದು ಹಲವು ಪೊಲೀಸರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಂಜು, ಸುನೀಲ್ ಸೇರಿದಂತೆ 7 ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

Related Articles

Back to top button