*ಎಟಿಎಂ ದರೋಡೆ : ಮೃತ ಸಿಬ್ಬಂದಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ*
ಪ್ರಗತಿವಾಹಿನಿ ಸುದ್ದಿ : ಎಸ್.ಬಿ.ಐ ಬ್ಯಾಂಕ್ ಎಟಿಎಂ ದರೋಡೆ ದಾಳಿಯಲ್ಲಿ ನಿನ್ನೆ ಹತ್ಯೆಗೀಡಾದ ಭದ್ರತಾ ಸಿಬ್ಬಂದಿ ಗಿರಿ ವೆಂಕಟೇಶ್ ಅವರ ಬೇಮಳಖೇಡ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಇಂದು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ಅವರು ಮೃತನ ಕುಟುಂಬಕ್ಕೆ ಸರ್ಕಾರದಿಂದ ಸಮಗ್ರ ಪರಿಹಾರ ಒದಗಿಸಲು ಬದ್ಧವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ರೂ.8 ಲಕ್ಷ ಪರಿಹಾರ ಮತ್ತು ಹೆಚ್ಚುವರಿಯಾಗಿ ರೂ.10 ಲಕ್ಷ, ಪಿಂಚಣಿ ಹಾಗೂ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸದ್ಯಕ್ಕೆ ತಾತ್ಕಾಲಿಕವಾಗಿ ಕುಟುಂಬದವರಿಗೆ ಉದ್ಯೋಗ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ದುರಂತಕ್ಕೆ ಕಾರಣವಾದ ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವುದಾಗಿ ತಿಳಿಸಿದರು. ಸದ್ಯ ಗಾಯಾಳು ಓರ್ವ ಸಿಬ್ಬಂದಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ