Kannada NewsKarnataka NewsLatestNational

*BREAKING: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ NIA*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಕೇರಳದ ಕೊಚ್ಚಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಉಮರ್ ಫಾರೂಕ್ ಬಂಧಿತ ಆರೋಪಿ. ನಿಷೇಧಿತ ಪಿಎಫ್ ಐ ಸಂಘಟನೆ ಈತನಿಗೆ ಆಶ್ರಯ ಕೊಟ್ಟಿತ್ತು. ಕೆಲ ದಿನಗಳ ಹಿಂದೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಎನ್ ಐಎ ಬಂಧಿಸಿತ್ತು. ವಿಚಾರಣೆ ವೇಳೆ ಇವರು ನೀಡಿದ ಮಾಹಿತಿ ಮೇರೆಗೆ ಉಮರ್ ಫಾರೂಕ್ ನನ್ನು ಬಂಧಿಸಲಾಗಿದೆ.

Home add -Advt

ಆರೋಪಿ ಉಮರ್ ಫಾರೂಕ್ ಹತ್ಯೆ ಪ್ರಕರಣದ ಇತರ ಆರೋಪಿಗಳು ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ. ಬಳಿಕ ಈತ ಕಳೆದ ನಾಲ್ಕು ವರ್ಷಗಳಿಂದ ಕೊಚ್ಚಿಯಲ್ಲಿ ಅಜ್ಞಾತ ಸ್ಥಳದಲ್ಲಿ ವಾಸವಾಗಿದ್ದ. ಇದೀಗ ಉಮರ್ ಫಾರೂಕ್ ನನ್ನು ಎನ್ ಐಎ ಬಂಧಿಸಿದ್ದು., ಈ ಮೂಲಕ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ನಲ್ಲಿ ಬಂಧಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

Related Articles

Back to top button