Latest

ನನ್ನ ಮಗ ಡ್ರಗ್ಸ್ ಸೇವಿಸಲು ಸಾಧ್ಯವಿಲ್ಲ; ಅಷ್ಟು ಮಾತ್ರ ಹೇಳುತ್ತೇನೆ; ಬಾಲಿವುಡ್ ನಟ ಶಕ್ತಿ ಕಪೂರ್ ಹೇಳಿಕೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬೆಂಗಳೂರಿನ ಹೋಟೆಲ್ ನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿಬಿದ್ದಿರುವ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಬೆನ್ನಲ್ಲೇ ಪೊಲಿಸರು ಬಂಧಿಸಿದ್ದಾರೆ. ಆದರೆ ಮಗನನ್ನು ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ತಂದೆ ಶಕ್ತಿ ಕಪೂರ್ ನನ್ನ ಮಗ ಡ್ರಗ್ಸ್ ಸೇವಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಬಾಲಿವುಡ್ ನಟ ಶಕ್ತಿ ಕಪೂರ್, ನನ್ನ ಮಗ ಡ್ರಗ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದು ಅಸಾಧ್ಯ, ಇಷ್ಟು ಮಾತ್ರ ನಾನು ಹೇಳಬಲ್ಲೆ. ಆತ ಡ್ರಗ್ಸ್ ಸೇವಿಸಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ದಿ ಪಾರ್ಕ್ ಹೋಟೆಲ್ ನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಪೊಲೀಸರು ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟ ಸಿದ್ಧಾಂತ್ ಕಪೂರ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದರು. ಸಿದ್ಧಾಂತ್ ಕಪೂರ್ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪೊಲಿಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಪಾರ್ಕ್ ಹೋಟೆಲ್ ನಲ್ಲಿ ಓಪನ್ ಪಾರ್ಟಿ ಆಯೋಜಿಸಲಾಗಿತ್ತು. ಸಾರ್ವಜನಿಕರಿಗೂ ಈ ಡ್ರಗ್ಸ್ ಪಾರ್ಟಿಯಲ್ಲಿ ಭಾಗವಹಿಸಲು ಅವಕಾಶ ನೀದಲಾಗಿತ್ತು. ತಡ ರಾತ್ರಿ ನಡೆಸಿದ ದಾಳಿಯಲ್ಲಿ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಯುವತಿಯರೂ ಇದ್ದು, ಪಾರ್ಟಿಯಲ್ಲಿ ಹೊರ ರಾಜ್ಯದವರೇ ಬಹುತೇಕರು ಭಾಗಿಯಾಗಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Home add -Advt

ನಟ ಸಿದ್ಧಾಂತ್ ಕಪೂರ್ ಸೇರಿ 6 ಜನರ ಬಂಧನ

ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ ಮಾಡಿದ್ದವರ ಗಡಿಪಾರು…!

Related Articles

Back to top button