ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಮಾಜಿ ಸಚಿವ, ಕೆಎಂಎಫ್ ಮಾಜಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇತ್ತು. ಆದರೆ ಬಾಲಚಂದ್ರ ಜಾರಕಿಹೊಳಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಆಯ್ಕೆಯಾಗಿರುವುದಾಗಿ ಘೋಷಿಸಲಾಯಿತು. ಒಟ್ಟೂ 16 ನಿರ್ದೇಶಕರಲ್ಲಿ 13 ನಿರ್ದೇಶಕರು ಬಾಲಚಂದ್ರ ಜಾರಕಿಹೊಳಿ ಬೆಂಬಲಿತರು. ಮುಂದಿನ 5 ವರ್ಷದವರೆಗೆ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷರಾಗಿರಲಿದ್ದಾರೆ. ಈ ವೇಳೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಎಲ್ಲರೂ ಸೇರಿ ನಾನೇ ಅಧ್ಯಕ್ಷರಾಗಬೇಕೆಂದು ಒತ್ತಾಯಿಸಿದರು. … Continue reading ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ